ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಕುಟುಕು ಮುಂದುವರಿಸಿದ್ದು, ಸಚಿವರ ಹೇಳಿಕೆ ಆಧರಿಸಿ ತಿರುಗೇಟು ನೀಡಿದೆ.
ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೇಳುತ್ತಾರೆ.
ನಾವು ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡು ತ್ತಿದ್ದೇವೆ. ಸಹಕಾರ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಜವಾಬ್ದಾರಿಯುತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳುತ್ತಾರೆ. ಕಾನೂನು ಸಚಿವರೇ ಕೆಲಸ ಮಾಡುತ್ತಿಲ್ಲ ಎಂದು ಎಸ್.ಟಿ. ಸೋಮಶೇಖರ್ ತಿಳಿಸುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಲಿ ಎಂದು ಮುನಿರತ್ನ ಒತ್ತಾಯಿಸುತ್ತಾರೆ. ರಾಜ್ಯ ಕಂಡ ಕಳಪೆ ಸರಕಾರ ಇದು ಎನ್ನಲು ಇದಕ್ಕಿಂತ ಪುರಾವೆ ಬೇಕೇ ಎಂದು ಪ್ರಶ್ನಿಸಲಾಗಿದೆ.
ಮತ್ತೊಂದು ಟ್ವೀಟ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶೂ ಸಮೇತ ಹಾಜರಾಗಿದ್ದಕ್ಕೆ ಕಿಡಿಕಾರಿದೆ. ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ. ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇ ಶನ ನಾಗಪುರದಿಂದ ಬಂದಿತ್ತೇ ಆರಗ ಜ್ಞಾನೇಂದ್ರ ಅವರೇ ಎಂದು ಪ್ರಶ್ನಿಸಲಾಗಿದೆ.