ಬೆಳಗಾವಿಯ ಚನ್ನಮ್ಮಾಜಿ ವೃತ್ತದಲ್ಲಿರುವ ವಿಶ್ವರಾಜ್ ಶುಗರ್ ಇಂಡಸ್ಟ್ರೀಸ್ ಲಿಮಿಟೆಡ್‍ನ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿ ಕರವೇ ಶಿವರಾಮೇಗೌಡ ಬಣದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಹೌದು ಬೆಳಗಾವಿಯ ಚನ್ನಮ್ಮಾಜಿ ವೃತ್ತದ ಒಂದು ಭಾಗದಲ್ಲಿ ಸೌಂದರ್ಯಿಕರಣ ಮಾಡುವ ಉದ್ದೇಶದಿಂದ 2011ರಲ್ಲಿ ವಿಶ್ವ ಕನ್ನಡ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಸಚಿವ ಉಮೇಶ ಕತ್ತಿ ತಮ್ಮ ವಯಕ್ತಿಕ ಖರ್ಚಿನಲ್ಲಿ ವಿಶ್ವರಾಜ್ ಶುಗರ್ ಇಂಡಸ್ಟ್ರೀಸ್ ಲಿಮಿಟೆಡ್ ವಿಎಸ್‍ಎಲ್ ಎಂದು ತಡೆಗೋಡೆ ಮೇಲೆ ಬರೆದಿರುವ ಆಕರ್ಷಕ ನಾಮಫಲಕವನ್ನು ಅನಾವರಣಗೊಳಿಸಿದ್ದರು.
ಇದೀಗ ಈ ನಾಮಫಲಕ ತೆರವುಗೊಳಿಸಿ ರಾಣಿ ಚನ್ನಮ್ಮಾಜಿ ಹೆಸರು ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ತಮ್ಮ ಹೆಸರನ್ನು ಬೇಕಾದ್ರೆ ಅವರ ಮನೆ ಮುಂದೆ ಹಾಕಿಕೊಳ್ಳಲಿ ಎಂದು ಕನ್ನಡ ಹಿರಿಯ ಹೋರಾಟಗಾರ್ತಿ ಕಸ್ತೂರಿ ಭಾವಿ ಹಾಗೂ ವಾಜೀದ್ ಹಿರೇಕೂಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಉಮೇಶ ಕತ್ತಿ ಒಡೆತನದ ವಿಶ್ವರಾಜ್ ಶುಗರ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಕ್ಷರಗಳನ್ನು ತೆರವುಗೊಳಿಸಲು ಕನ್ನಡ ಹೋರಾಟಗಾರರು ಮುಂದಾದರು.
ಇದಕ್ಕೆ ಪೊಲೀಸರು ಅಡ್ಡಿಪಡಿಸುತ್ತಿದ್ದಂತೆ ಪೊಲೀಸರು ಮತ್ತು ಹೋರಾಟಗಾರರ ಮಧ್ಯ ವಾಗ್ವಾದ ನಡೆಯಿತು.