Breaking News
Home / Uncategorized / ಕರ್ನಾಟಕ ರಾಜ್ಯವನ್ನು ಇಟಲಿ ನ್ಯೂಯಾರ್ಕ್ ಮಾಡಬೇಡಿ ಎಂದು ಪತ್ರ ಬರೆದು ಎಚ್ ಕೆ ಪಾಟೀಲ್

ಕರ್ನಾಟಕ ರಾಜ್ಯವನ್ನು ಇಟಲಿ ನ್ಯೂಯಾರ್ಕ್ ಮಾಡಬೇಡಿ ಎಂದು ಪತ್ರ ಬರೆದು ಎಚ್ ಕೆ ಪಾಟೀಲ್

Spread the love

ಬೆಂಗಳೂರು: ಕರ್ನಾಟಕವನ್ನು ಇಟಲಿ, ನ್ಯೂಯಾರ್ಕ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್‌. ಕೆ ಪಾಟೀಲ್‌ ಅವರು ಪತ್ರವನ್ನು ಬರೆದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು ಕೂಡಲೇ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಪತ್ರದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಅವರು ಆಗ್ರಹಿಸಿದ್ದಾರೆ.

ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಾಡುತ್ತಿರುವ ಪ್ರಯತ್ನಗಳು ಏನೇನು ಸಾಲದು, ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವ, ಗಂಭೀರ ರೋಗಿಗಳ ಕಾಳಜಿಯಲ್ಲಿ ಕೊರತೆ, ಇನ್ನೂ ಅನೇಕ ಕ್ರಮಗಳನ್ನು ಕೈಗೊಳ್ಳುವಲ್ಲಿ ಪ್ರಮಾದಗಳು ನಡೆದಿದೆ ಎಂದು ದೂರಿದ್ದಾರೆ.

ಸರ್ಕಾರದ ದೂರದೃಷ್ಟಿ ಹಾಗೂ ದಿಕ್ಸೂಚಿ ಇಲ್ಲದ ಕ್ರಮಗಳಿಂದಾಗಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಇತರರ ಸಲಹೆಗಳನ್ನು ಸರ್ಕಾರ ಪರಿಗಣಿಸಬೇಕಿ ಎಂದಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರೀಕನು ಕೊರೊನಾ ವಿಮೆ ವ್ಯಾಪ್ತಿಗೆ ತರಬೇಕು, ಸಿಬ್ಬಂದಿ ಕೊರತೆ ಎದುರಾಗದಂತೆ ತುರ್ತು ಕೋವಿಡ್‌ ನೇಮಕಾತಿ ಮಾಡಬೇಕು, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಅಂಬ್ಯುಲೆನ್ಸ್ ಆಗಿ ಪರಿವರ್ತನೆ ಮಾಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅಲ್ಲದೆ ಸಾಮೂಹಿಕ ತಪಾಸನೆ, ಹಾಗೂ ಜೀವ ರಕ್ಷಕ ಔಷಧಿಗಳನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಕ್ರಮವನ್ನು ಸರ್ಕಾರ ಕೂಡಲೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ