ಕಳೆದ 15 ದಿನಗಳಿಂದ ಬೆಳಗಾವಿ ನಗರದಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆಯ ಮತ್ತಷ್ಟು ಚುರುಕುಗೊಂಡಿದ್ದು. ದೊಡ್ಡ ಮಟ್ಟದ ಕಾರ್ಯಾಚರಣೆ ಕೈಗೊಂಡಿದೆ.
ಹೌದು ಆಗಸ್ಟ್ 5ರಂದು ಬೆಳಗಾವಿಯ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಫೋರ್ಸ ಸಿಬ್ಬಂದಿಗಳಿಗೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಭರಮಣಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಯ ಕಾರ್ಯಾಚರಣೆಯ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ನಂತರ ಚಿರತೆ ಪತ್ತೆಯ ಕಾರ್ಯಾಚರಣೆಯನ್ನು ಆರಂಭಿಸಲಾಯಿತು.
ಪೆÇಲೀಸ್ ಇಲಾಖೆ ಧ್ವನಿವರ್ಧಕಗಳ ಮೂಲಕ, ಗಾಲ್ಫ್ ಪ್ರದೇಶ, ಹನುಮಾನಗರ, ಕುವೆಂಪು ನಗರ, ದೂರದರ್ಶನ ನಗರ, ಜಾಧವ ನಗರ ಹಾಗೂ ಕ್ಯಾಂಪ್ ಪ್ರದೇಶದ ಜನರಿಗೆ ಜಾಗೃತಿ ಮೂಡಿಸಲಾಯಿತು. ಯಾರೊಬ್ಬರೂ ಮನೆಯಿಂದ ಹೊರಗೆ ಬರಬಾರದು ಎನ್ನುವ ಎಚ್ಚರಿಕೆಯ ಸಂದೇಶ ನೀಡಲಾಯಿತು.