ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.