Breaking News

ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿದ್ದ 12 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

Spread the love

ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು.

 

ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೀಗೆ ಶುಕ್ರವಾರದಂದು ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಲವರು, ಸಾವರ್ಕರ್ ಅವರ ಭಾವಚಿತ್ರವನ್ನು ಕಾಲಿನಲ್ಲಿ ತುಳಿದು, ಅದರ ಮೇಲೆ ಮೊಟ್ಟೆ ಒಡೆದು ಬಳಿಕ ಬೆಂಕಿಯಲ್ಲಿ ಹಾಕಿ ಸುಟ್ಟು ಹಾಕಿದ್ದರು.

ಈ ಸಂಬಂಧ ಶಿವಾನಂದ ಸತ್ತಿಗೇರಿ ಎಂಬವರು ದೂರು ನೀಡಿದ್ದು, 12 ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಸಾವರ್ಕರ್ ಭಾವಚಿತ್ರ ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ