Breaking News

ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ: ಕಾಂಗ್ರೆಸ್​ ತಿರುಗೇಟು

Spread the love

ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್ ಕಾರ್ಯಕರ್ತ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ವ್ಯಕ್ತಿ ಗಣ ವೇಷಧಾರಿಯಾಗಿರುವ ಭಾವಚಿತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಆರೋಪಿ ಆರೋಪಿ ಸಂಪತ್‌, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಆರ್​ಎಸ್​ಎಸ್​ ಶಾಖೆಯಲ್ಲಿ ಗಣವೇಷಧಾರಿಯಾಗಿ ಸಂಪತ್‌ ಇರುವ ಫೋಟೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದೆ.

ಬಿಜೆಪಿ ಹಾಗೂ ಆರ್​ಎಸ್​ಎಸ್ ತಮ್ಮ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ. ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್​ಎಸ್​ಎಸ್ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ