Breaking News
Home / ರಾಜಕೀಯ / ಸ್ಪೈ ಕ್ಯಾಮರಾ ಬಳಸಿ ನಗ್ನ ಚಿತ್ರ ಸೆರೆ.. ಯುವತಿಗೆ ಅದೇ ಫೋಟೋ ಕಳಿಸಿ ಬ್ಲಾಕ್ ಮೇಲ್

ಸ್ಪೈ ಕ್ಯಾಮರಾ ಬಳಸಿ ನಗ್ನ ಚಿತ್ರ ಸೆರೆ.. ಯುವತಿಗೆ ಅದೇ ಫೋಟೋ ಕಳಿಸಿ ಬ್ಲಾಕ್ ಮೇಲ್

Spread the love

ಬೆಂಗಳೂರು: ನಗರದಲ್ಲಿ ಸ್ಪೈ ಕ್ಯಾಮರಾ ಬಳಸಿ ಮಹಿಳೆಯರ ನಗ್ನ ಚಿತ್ರ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸ್ಪೈ ಕ್ಯಾಮರಾ ಬಳಸಿ ಮಹಿಳೆಯರ ನಗ್ನ ಚಿತ್ರ ಸೆರೆ ಹಿಡಿಯುತ್ತಿದ್ದ ಮಹೇಶ ಬಂಧಿತ ಆರೋಪಿ. ಮೊದಲು ಯುವತಿಗೆ ನಕಲಿ ಇನ್​​ಸ್ಟಾಗ್ರಾಮ್ ಮೂಲಕ ಮೆಸೇಜ್ ಮಾಡಿದ್ದ ಮಹೇಶ, ತನ್ನ ಜೊತೆ ಚಾಟ್ ಮಾಡು ಇಲ್ಲದಿದ್ದರೆ ನಗ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹೆದರಿಸಿದ್ದ ಎಂದು ಪ್ರಕರಣದ ಕುರಿತು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹೆದರಿದ ಯುವತಿ ನಕಲಿ ಇನ್​ಸ್ಟಾಗ್ರಾಮ್ ಖಾತೆಯನ್ನು ಬ್ಲಾಕ್ ಮಾಡಿದ್ದರು. ಆದರೆ, ಮತ್ತೊಂದು ಖಾತೆಯಿಂದ ಆರೋಪಿ ಯುವತಿಗೆ ಆಕೆಯ ನಗ್ನ ಫೋಟೋವನ್ನು ಕಳುಹಿಸಿದ್ದ. ಈ ಬೆಳವಣಿಗೆಗೆ ಹೆದರಿದ ಯುವತಿ ಈಶಾನ್ಯ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಸಂಬಂಧ ಇದೀಗ ಆರೋಪಿ‌ ಮಹೇಶನನ್ನು ಬಂಧಿಸಿ ಹೆಚ್ಚಿನ ವಿಚಾರಣಗೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ