Breaking News

ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ

Spread the love

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆದಿದ್ದಾರೆ.

ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ.

ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ಅರಕಲಗೂಡು ಶಾಸಕ ಎಟಿ.ರಾಮಸ್ವಾಮಿ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ರೇವಣ್ಣ ಸರ್ವಾಧಿಕಾರಿ ಮನೋಭಾವನೆಯನ್ನು ಬಿಡಬೇಕು ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗೊರೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅರಕಲಗೂಡು ಶಾಸಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ