Breaking News

ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಶಶಿಧರಕುರೇರ ನೇಮಕ

Spread the love

ಬೆಳಗಾವಿ – ಐಎಎಸ್ ಅಧಿಕಾರಿಯಾಗಿ ಈಚೆಗಷ್ಟೆ ಭಡ್ತಿ ಪಡೆದಿರುವ ಬೆಳಗಾವಿಯ ಮಲಪ್ರಭಾ, ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(ಕಾಡಾ) ಆಡಳಿತಾಧಿಕಾರಿ ಶಶಿಧರ ಕುರೇರ ಅವರನ್ನು ವರ್ಗಾವಣೆ ಮಾಡಲಾಗಿದೆ.

ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಕುರೇರ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಹಾಲಿ ಸಿಇಒ ಚಂದ್ರಶೇಖರ ನಾಯಕ ಅವರ ಸ್ಥಾನದಲ್ಲಿ ಕುರೇರ ಅವರು ನೇಮಕವಾಗಿದ್ದು, ಇದು ಐಎಎಸ್ ಅಧಿಕಾರಿಯಾಗಿ ಅವರ ಮೊದಲ ಹುದ್ದೆಯಾಗಿದೆ.

ಕುರೇರ ಅವರು ಕೆಎಎಸ್ ಹುದ್ದೆಯಲ್ಲಿ ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ