Breaking News

ಬಿಪಿಎಲ್ ಕುಟುಂಬಗಳಿಗೆ ಬಿಗ್ ಶಾಕ್: ‘ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಕಡಿತ ಸಾಧ್ಯತೆ

Spread the love

ಬೆಂಗಳೂರು: ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟಂಬರ್ ವರೆಗೆ ವಿತರಿಸಲಾಗುವುದು.

ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಬಡವರಿಗೆ ಆಹಾರ ಭದ್ರತೆ ಒದಗಿಸಲು ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರ ಉಚಿತವಾಗಿ ಆಹಾರಧಾನ್ಯ ಪೂರೈಕೆ ಮಾಡುತ್ತಿದ್ದು, ಈ ಯೋಜನೆ ಸೆಪ್ಟೆಂಬರ್ ಗೆ ಮುಕ್ತಾಯವಾಗಲಿದ್ದು, ಅಕ್ಟೋಬರ್ ಗೆ ಅಕ್ಕಿ ಕಡಿತವಾಗಬಹುದು.

ರಾಜ್ಯದ 4.01 ಕೋಟಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ, ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸಲಾಗುತ್ತಿದೆ. ಕೇಂದ್ರದಿಂದ ಮಾಸಿಕ 2.15 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆಯಾಗುತ್ತಿದ್ದು, ರಾಜ್ಯದ ಪಾಲು 2.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಗರೀಬ್ ಕಲ್ಯಾಣ ಯೋಜನೆ ಸ್ಥಗಿತಗೊಂಡ ನಂತರ 5 ಕೆಜಿ ಅಕ್ಕಿ ಹಾಗೂ ಎರಡು ಕೆಜಿ ರಾಗಿ ಅಥವಾ ಜೋಳ ವಿತರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ