Breaking News

ಸರ್ಕಾರ ಸಮಯಕ್ಕೆ ಸರಿ ನಿರ್ಧಾರ ಕೈಗೊಳ್ಳುತ್ತಿಲ್ಲ: ಸಚಿವ ನಿತಿನ್‌ ಗಡ್ಕರಿ

Spread the love

ಮುಂಬೈ: “ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ’ -ಹೀಗೆ ಹೇಳಿರುವುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ.

ಮುಂಬೈನಲ್ಲಿ ಅಸೋಸಿಯೇಷನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಇಂಜಿನಿಯರ್ಸ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿತಿನ್‌ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ.

 

“ನೀವು ಪವಾಡಗಳನ್ನು ಸೃಷ್ಟಿಸಬಹುದು. ಆ ಸಾಮರ್ಥ್ಯ ಇಲ್ಲಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದೆ. ನಾವು ಅತ್ಯುತ್ತಮ ತಂತ್ರಜ್ಞಾನ, ನಾವಿನ್ಯತೆ, ಸಂಶೋಧನೆಯನ್ನು ಅಳವಡಿಸಿಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಗುಣಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳದೆಯೇ ಪರ್ಯಾಯ ವಸ್ತುಗಳನ್ನು ಬಳಸಬೇಕು. ನಿರ್ಮಾಣಕ್ಕೆ ಸಮಯ ಅತ್ಯಂತ ಮುಖ್ಯವಾಗುತ್ತದೆ. ಸರ್ಕಾರದ ದೊಡ್ಡ ಸಮಸ್ಯೆಯೆಂದರೆ ಸಕಾಲಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು’ ಎಂದರು.

ಈ ಮೂಲಕ ಸಮಯವು ಬೇರೆಲ್ಲ ಸಂಪನ್ಮೂಲಗಳಿಗಿಂತ ಪ್ರಾಮುಖ್ಯತೆ ಹೊಂದಿದೆ ಎಂದು ನಿತಿನ್‌ ಗಡ್ಕರಿ ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ಪುನಾರಚಿಸಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿಯಿಂದ ಗಡ್ಕರಿ ಅವರನ್ನು ಕೈಬಿಡಲಾಗಿತ್ತು.


Spread the love

About Laxminews 24x7

Check Also

ಆರ್​ಎಸ್​ಎಸ್​ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ

Spread the loveಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ