Breaking News

ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ

Spread the love

ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‍ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್‍ನ್ನು ಸವದತ್ತಿ ಧಾರವಾಡ ಬೈಪಾಸ್ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಗಾಡಿಯಲ್ಲಿ ಮಲಗಿದ್ದ ವೇಳೆ ಟ್ರಕ್ ಡಿಸೇಲ್ ಟ್ಯಾಂಕ್‍ನಲ್ಲಿದ್ದ ಸುಮಾರು 400ಲೀಟರ್‍ದಷ್ಟು ಡಿಸೇಲ್‍ನ್ನು ಕಳುವು ಮಾಡಿಕೊಂಡು ಹೋಗಿದ್ದರು.

ಈ ಕುರಿತಂತೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಖಲಾಗಿತ್ತು.
ಈ ಪ್ರಕರಣವನ್ನು ಬೆನ್ನತ್ತಿದ ರಾಮದಯರ್ಗ ಡಿವೈಎಸ್‍ಪಿ ರಾಮನಗೌಡ ಹಟ್ಟಿ, ಸರ್ಕಲ್ ಇನ್ಸ್‍ಪೆಕ್ಟರ್ ಕರುಣೇಶಗೌಡ ಜೆ ಮಾರ್ಗದರ್ಶನದಲ್ಲಿ ಎಸ್‍ಐ ಶಿವಾನಂದ ಗುಡಗನಟ್ಟಿ ಹಾಗೂ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿ ಇಂದು ಆಗಸ್ಟ್ 24ರಂದು ಬೆಳಗಿನ ಜಾವ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ