ಇತ್ತೀಚೆಗೆ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಆಗಸ್ಟ್ 15 ರಂದು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸದೇ ತಾಲ್ಲೂಕು ಆಡಳಿತ ಅವಮಾನ ಮಾಡಿರೋದಾಗಿ ಆರೋಪಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಚಿಕ್ಕೋಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಯಿಂದ ಹೊರಟ ಮೆರವಣಿಗೆಯು ಬಸವ ಸರ್ಕಲ್ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿತು.
ಆಗಸ್ಟ್ 15 ರಂದು ರಾಷ್ಟ್ರಧ್ವಜಾರೋಹಣ ಮಾಡುವಾಗ ತಾಲ್ಲೂಕು ಆಡಳಿತವು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಫೋಟೊವನ್ನು ಇರಿಸಿ ಪೂಜಿಸಿದೇ ಅವಮಾನ ಮಾಡಿದ್ದು, ಹೀಗಾಗಿ ಚಿಕ್ಕೋಡಿ ತಾಲ್ಲೂಕು ಆಡಳಿತಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಚಿಕ್ಕೋಡಿ ಪಟ್ಟಣದ ಬಸವ ಸರ್ಕಲ್ ನಲ್ಲಿ ಕೆಲ ಕಾಲ ನಿಂತು ಪ್ರತಿಭಟನಾಕಾರರು ಘೋಷಣೆ ಕೂಗಿ, ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ಚಿಕ್ಕೋಡಿ ತಹಶೀಲ್ದಾರ ಹಾಗೂ ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಚೇರಿ ಎದುರಿನಲ್ಲಿ ಕುಳಿತು ಪ್ರತಿಭಟನೆಯನ್ನು ನಡೆಸಿದರು.