ಶಿವಮೊಗ್ಗ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ. ಕೋರ್ಟ್ನಲ್ಲೂ ನನಗೆ ಕ್ಲೀನ್ಚಿಟ್ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಕೆ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆಯಲ್ಲಿ ನನಗೆ ಕ್ಲೀನ್ಚಿಟ್ ಸಿಕ್ಕಿದೆ. ಪ್ರಕರಣದಿಂದ ಮುಕ್ತವಾಗಿ ಹೊರಬಂದಿದ್ದೇನೆ. ಅವರಿಗೆ ಕೋರ್ಟ್‌ಗೆ ಹೋಗೋ ಅಧಿಕಾರ ಇದೆ, ಹೋಗಿದ್ದಾರೆ ಎಂದರು.
Laxmi News 24×7