Breaking News

ತಾಯಿಯೊಬ್ಬಳು ಪ್ಲಾಸ್ಟಿಕ್‌ ಕವರ್​ನಲ್ಲಿ ಗಂಡು ಮಗುವನ್ನಿಟ್ಟು ಮರಕ್ಕೆ ನೇತು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.

Spread the love

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ, ಚಿಕ್ಕಮಕ್ಕಳ ವೈದ್ಯ ಡಾ.ಪವನ್ ಪೂಜಾರಿ ಎಂಬುವವರು ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಕಳೆದ ರಾತ್ರಿ ಮಗುವನ್ನು ಪ್ಲ್ಯಾಸ್ಟಿಕ್ ಕವರನಲ್ಲಿ ಹಾಕಿದ್ದರಿಂದ ಮಗುವಿನ ಆರೋಗ್ಯದಲ್ಲಿ ಏರು ಪೇರಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಬಿಮ್ಸ್​ಗೆ ಮಗುವನ್ನು ರವಾನಿಸಲಾಗಿದ್ದು, ಸದ್ಯ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ