Breaking News

ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ – H.D.D. ಕಿಡಿ

Spread the love

ನವದೆಹಲಿ: ಕುಮಾರಸ್ವಾಮಿ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರ ಪ್ರತಿ ಕೆಲಸದಲ್ಲೂ ತಪ್ಪು ಕಂಡು ಹಿಡದು ಟೀಕಿಸುವ ವ್ಯವಸ್ಥಿತ ಕೆಲಸವಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಪಿಸಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ಧ ಕಟ್ಟು ಕಥೆಗಳನ್ನು ಕಟ್ಟಲಾಗುತ್ತಿದೆ ಎಂದರು.

ಹಿಂದೆ ಸರ್ಕಾರ ಇದ್ದ ಸಂದರ್ಭದಲ್ಲಿ ರೇವಣ್ಣ ವಿರುದ್ಧ ಅಪಪ್ರಚಾರ ಮಾಡಲಾಯಿತು. ರೇವಣ್ಣ ಅವರನ್ನು ಸೂಪರ್ ಸಿಎಂ ಎಂದು ಆರೋಪಿಸುತ್ತಿದ್ದರು. ಕುಮಾರಸ್ವಾಮಿ ಯಡಿಯೂರಪ್ಪ ಭೇಟಿ ಮಾಡಿ ಕ್ಷೇತ್ರಕ್ಕೆ ಸಂಬಂಧಿಸಿದ್ದರ ಬಗ್ಗೆ ಮಾತನಾಡಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ ಎಂದರು.

ಈಗ ಬಿಎಸ್‍ವೈ ಸರ್ಕಾರದಲ್ಲಿ ಬಿ.ವೈ ವಿಜಯೇಂದ್ರ ಅವರ ಹಸ್ತಕ್ಷೇಪದ ಆರೋಪ ಮಾಡಲಾಗುತ್ತಿದೆ. ವಿಪಕ್ಷಗಳಲ್ಲ ಸ್ವಪಕ್ಷೀಯರೇ ಹೈಕಮಾಂಡ್ ದೂರು ನೀಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು


Spread the love

About Laxminews 24x7

Check Also

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ