Breaking News

ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ

Spread the love

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ‌ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು.

 

ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದ್ರೆ, ಇದ್ಯಾವುದನ್ನೂ ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ‌ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಇದಲ್ಲದೆ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ