Breaking News

ಶಾಸಕರು ಸಚಿವರೇ ಬಿಎಸ್‍ವೈ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದು:H.D.D.

Spread the love

ನವದೆಹಲಿ: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದೆ. ಶಾಸಕರು ಸಚಿವರೇ ಬಿಎಸ್‍ವೈ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದು ಬಿ.ವೈ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿಎಂ ಬಿಎಸ್‍ವೈ ದೆಹಲಿ ಪ್ರವಾಸ ವೇಳೆ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ವಿರೋಧದ ನಡುವೆಯೇ ಬಿಎಸ್‍ವೈ ಮತ್ತಷ್ಟು ದಿನಗಳ ಕಾಲ ಮುಂದುವರಿಯಲು ಹೈಕಮಾಂಡ್ ಸೂಚನೆ ನೀಡಿದೆ .

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮೊದಲ ಬಾರಿಗೆ ಧ್ವನಿಗೂಡಿಸಿದ್ದು ಬಿಎಸ್‍ವೈ ವಿರುದ್ಧ ಪರೋಕ್ಷವಾಗಿ ನಾಯಕತ್ವ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿಯಲ್ಲಿ 75 ವರ್ಷ ಆದವರಿಗೆ ಅಧಿಕಾರ ಇಲ್ಲ ಎಂಬ ನಿಯಮವಿದೆ. ಇದೇ ಕಾರಣಕ್ಕೆ 8 ಬಾರಿ ಗೆದ್ದಿದ್ದ ಸುಮಿತ್ರಾ ಮಹಾಜನ್ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ ಆದರೆ ಯಡಿಯೂರಪ್ಪ ವಿಚಾರದಲ್ಲಿ ಏಕೆ ನಿಯಮ ಸಡಿಲಿಸಿದ್ದಾರೋ ಗೊತ್ತಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ದನಿಗೂಡಿಸಿದ್ದಾರೆ.

ವಯಸ್ಸಿನ ಹಿನ್ನಲೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದೆ. ಆದರೆ ಒತ್ತಡದ ಮೇಲೆ ಸ್ಪರ್ಧಿಸಿದ್ದೆ. ಇದಾದ ಬಳಿಕ ಸೋನಿಯಾ ಗಾಂಧಿ ರಾಜ್ಯಸಭೆಗೆ ಬರುವಂತೆ ಒತ್ತಾಯಿಸಿದ್ದರು. ರಾಜ್ಯದ 3 ಪಕ್ಷಗಳು ಅವಿರೋಧವಾಗಿ ಒಪ್ಪಿದ್ದರಿಂದ ರಾಜ್ಯಸಭೆಗೆ ಬಂದಿದ್ದೇನೆ. ದೇವರ ಆಟ ಏನೇನಿದೆಯೋ ಗೊತ್ತಿಲ್ಲ ಎಂದರು.


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ