Breaking News

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

Spread the love

ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಶಿವರಾಜ ರುದ್ರಪ್ಪನವರ,ಬಾಳಯ್ಯ ಹಿರೇಮಠ, ತಿಮ್ಮಣ್ಣ ಬಂಡಿವಡ್ಡರ,ಬಿರಬಲ್ಲ ಡೋಳ್ಳಿ,ತಮ್ಮನಗೌಡ ಪಾಟಿಲ ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ