Breaking News

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ

Spread the love

ಕಲಬುರಗಿ: 545 ಪಿಎಸ್‌ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ.

ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.

 

ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.‌

ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಅವಲೋಕಿಸಿ ಕೊನೆಗೂ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.‌


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ