Breaking News

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು

Spread the love

ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊà ಕಾಯಿದೆಯಡಿ

ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಮಕ್ಕಳ ವಸತಿ ಕೇಂದ್ರ ವಾದ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಆ ಸಂಸ್ಥೆ ಬಾಲಕಿಯರನ್ನು ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತುಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ಶುಕ್ರವಾರ ರಾತ್ರಿ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಘಟನೆ ನಡೆದಿರುವುದರಿಂದ ಪ್ರಕರಣವನ್ನು ಅಲ್ಲಿಯ ಠಾಣೆಗೆ ವರ್ಗಾಯಿಸಲಾಗಿದೆ. ಜತೆಗೆ ತನಿಖೆಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಡಿಸಿಪಿ ಪ್ರದೀಪ್‌ ಗುಂಟಿ ತಿಳಿಸಿದ್ದಾರೆ.

ಈ ಮಧ್ಯೆ, ಶನಿವಾರ ಇಡೀ ದಿನ ಚಿತ್ರದುರ್ಗದ ಮಠದಲ್ಲಿ ಬಿರುಸಿನ ಚಟುವಟಿಕೆಗಳು ನಡೆದವು. ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್‌ ಸ್ವಾಮೀಜಿ ಸಹಿತ ವಿವಿಧ ಮಠಾಧೀಶರು, ವಿವಿಧ ಸಮಾಜಗಳ ಮುಖಂಡರು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಮಠದ ಭಕ್ತರು ಮಠಕ್ಕೆ ಆಗಮಿಸಿ ಸ್ವಾಮೀಜಿಯವರನ್ನು ಬೆಂಬಲಿಸಿದರು. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಠಕ್ಕೆ ಭೇಟಿ ನೀಡಿ ಈ ದೂರಿನ ಬಗ್ಗೆ ನಂಬಿಕೆ ಇಲ್ಲ ಎಂದರು.

ಮತ್ತೊಂದೆಡೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್‌.ಕೆ. ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯಬಸವರಾಜನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

21ನೇ ಶತಮಾನದ ಕರಾಳ ಘಟನೆ: ಮುರುಘಾ ಶ್ರೀ
ಚಿತ್ರದುರ್ಗ: ಮುರುಘಾ ಶರಣರ ಬದುಕಿನಲ್ಲಿ ಅತ್ಯಂತ ದೊಡ್ಡ ಕಿರುಕುಳ ಇದಾಗಿದೆ. 21ನೇ ಶತಮಾನದ ಕರಾಳ ಘಟನೆ ಇದಾಗಿದೆ. ರೋಲ್‌ಕಾಲ್‌, ಬ್ಲಾಕ್‌ವೆುàಲ್‌ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಮುಖ್ಯವಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ