Breaking News

ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್ ಶ್ರೀಗಳಿಗೆ ಬಂಧನದ ಭೀತಿ

Spread the love

ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ.

ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಬಳಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರು ದಾಖಲಾಗಿದೆ. ಪ್ರಕರಣ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ.

ಸಂತ್ರಸ್ತೆಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆತಂದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ. ಬಾಲಕಿಯರನ್ನು ಸಿಡಬ್ಲ್ಯೂಸಿಯಲ್ಲಿ ಕೌನ್ಸಿಲಿಂಗ್ ಅಧಿಕಾರಿಗಳ ಮುಂದೆ ಹಾಜರು ಪಡಿಸಿ ಘಟನೆಯ ವಿವರವನ್ನು ಪಡೆದುಕೊಳ್ಳಲಾಗುತ್ತದೆ. ಇದನ್ನು ವೀಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗುತ್ತೆ. ಆ ಬಾಲಕಿಯರ ಹೇಳಿಕೆಯನ್ನು ಆಧರಿಸಿ ಮೆಡಿಕಲ್ ಟೆಸ್ಟ್‍ಗೆ ಒಳಪಡಿಸಲಾಗುತ್ತೆ.ಸಿಡಬ್ಲ್ಯೂಸಿಯಲ್ಲಿ ದೂರು ನೀಡಿದಂತೆಯೇ ಹೇಳಿಕೆ ನೀಡಿ ಮೆಡಿಕಲ್ ಟೆಸ್ಟ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದರೆ ಆರೋಪಿಗಳನ್ನೂ ಕೂಡ ಬಂಧಿಸಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗುತ್ತೆ. ಆರೋಪ ಸಾಬೀತಾದರೆ ಜಾಮೀನು ಸಿಗುವುದಿಲ್ಲ.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ