Breaking News

ಶಾಸಕ ಬೆಳ್ಳಿ ಪ್ರಕಾಶ್ ಸಚಿವರ ಮೇಲೆ ಹಲ್ಲೆಗೆ ಯತ್ನಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಶಾಸಕರನ್ನು ತಡೆದಿದ್ದಾರೆ

Spread the love

ಬೆಂಗಳೂರು: ಒಂದೆಡೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ ಇನ್ನೊಂದೆಡೆ ವಿಧಾನಸೌಧದ ಕ್ಯಾಂಟೀನ್ ನಲ್ಲೇ ಜನಪ್ರತಿನಿಧಿಗಳಿಬ್ಬರೂ ಹೊಡೆದಾಡಿಕೊಳ್ಳುವ ಹಂತಕ್ಕೆ ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಚಿವ ನಾರಾಯಣಗೌಡ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆದಿದ್ದು, ಇಬ್ಬರೂ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಕಡೂರು ಕ್ಷೇತ್ರದ ಅನುದಾನ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ತಿಂಗಳಿಂದ ಅಲೆದರೂ ಕೆಲಸ ಮಾಡಿಕೊಡದ ಸಚಿವರ ನಡೆ ವಿರುದ್ಧ ಶಾಸಕ ಬೆಳ್ಳಿ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿವೇಶನಕ್ಕೆ ಹಾಜರಾದ ಶಾಸಕ ಬೆಳ್ಳಿ ಪ್ರಕಾಶ್, ವಿಧಾನಸೌಧದ ಕ್ಯಾಂಟೀನ್ ನಲ್ಲಿ ಸಚಿವ ನಾರಾಯಣಗೌಡ ಅವರನ್ನು ಭೇಟಿಯಾಗಿ ಈ ಬಗ್ಗೆ ಕೇಳಿದ್ದಾರೆ. ಆದರೆ ಸಚಿವರು ಕೆಲಸವಿದ್ದರೆ ಕಚೇರಿಯಲ್ಲಿ ಬಂದು ಮಾತಾಡು ಎಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶಾಸಕ ಏಕವಚನದಲ್ಲಿ ಬೈದಿದ್ದಾರೆ. ಅಲ್ಲದೇ ಬೇರೆ ರಾಜ್ಯಗಳಲ್ಲಿ ಶಾಸಕರು ಹೇಳಿದ ಕೆಲಸ ತಕ್ಷಣ ಮಾಡಿಕೊಡಲಾಗುತ್ತೆ. ಆದರೆ ಇಲ್ಲಿ ಹಾಗಿಲ್ಲ ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ.

ಈ ವೇಳೆ ಸಚಿವರು-ಶಾಸಕರ ನಡುವೆ ಪರಸ್ಪರ ವಾಗ್ವಾದ ಗಲಾಟೆ ನಡೆದು ಶಾಸಕ ಬೆಳ್ಳಿ ಪ್ರಕಾಶ್ ಸಚಿವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇಬ್ಬರೂ ಹೊಡೆದಾಡಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಶಾಸಕರನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ