ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ.
ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಶನಿವಾರ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮೂಲಕ ದಾಖಲಾದ ಲೈಂಗಿಕ ಕಿರುಕುಳ ದೂರಿನ ಹಿನ್ನೆಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇನ್ನೂ ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಮುಂಬಾಗ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀಗಳನ್ನು ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಕರೆದೊಯ್ಯಲಾಗುತ್ತಿದೆ.