Breaking News

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಕೊಲೆ

Spread the love

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ‌ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ.

ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Spread the loveಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ  ವೇಳೆ ಮಸೀದಿಯಿಂದ ಕಲ್ಲು ಎಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ