Breaking News

ಈದ್ಗಾ ಮೈದಾನದಲ್ಲಿ ಗಣೇಶ; ಚುನಾವಣೆಗಾಗಿಯೇ ಎಂದು ಒಪ್ಪುವುದಿಲ್ಲ: ಜೋಶಿ

Spread the love

ಹುಬ್ಬಳ್ಳಿ: ”ಚುನಾವಣೆ ಬಂದಾಗ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬರುತ್ತವೆ. ಹೋರಾಟಗಳು ಕೂಡ ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಇರಬಹುದೇನೋ ಗೊತ್ತಿಲ್ಲ. ಆದರೆ ಇದು ಚುನಾವಣೆಗಾಗಿಯೇ ಎದ್ದಿದೆ ಎಂದು ನಾನು ಒಪ್ಪುವುದಿಲ್ಲ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

 

ಸೋಮವಾರ ಇಲ್ಲಿನ ಭವಾನಿ ನಗರದ ಅವರ ನಿವಾಸಕ್ಕೆ ಭೇಟಿ ನೀಡಿದ ಪಾಲಿಕೆ ಮೇಯರ್ ಹಾಗೂ ಸದಸ್ಯರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗಣೇಶ ಉತ್ಸವವು ಸಾಮಾಜಿಕ ಜಾಗೃತಿ ಮೂಡಿಸುವ ಹಾಗೂ ಶಾಂತಿ ಸೌಹಾರ್ಧತೆಯಿಂದ ಮಾಡುವ ಹಬ್ಬವಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ಸಮಿತಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದನ್ನು ಪಾಲನೆ ಮಾಡಬೇಕು. ಇತರೆ ಧರ್ಮದವರು ಕೂಡ ತಮ್ಮ ಹಬ್ಬಗಳಿಗೆ ಕೊಡಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ