Breaking News

ಗಣೇಶ ಹಬ್ಬದ ಹಿನ್ನೆಲೆ KSRTC ಬಸ್‌ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್

Spread the love

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ.

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ

ಸೀಟುಗಳು ಬುಕ್: ಇಂದು (ಆ.29) 8, 8,006, ಆ.30 ರಂದು 9,206, ಆ.31 ರಂದು 5,692 ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿದೆ. ಇಂದು 40 ಬಸ್ಸುಗಳು ಹಾಗೂ ನಾಳೆ ಆಗಸ್ಟ್ 30 ರಂದು 67 ಬಸ್ಸುಗಳನ್ನು ಕಾಯ್ದಿರಿಸಲಾಗಿದ್ದು, ಹೆಚ್ಚುವರಿಯಾಗಿ 500 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ