Breaking News

ಮುರುಘಾ ಶ್ರೀಗೆ ಮತ್ತೊಂದು ‘ಬಿಗ್‌ ಶಾಕ್‌’: ‘ಅಟ್ರಾಸಿಟಿ’ ಪ್ರಕರಣ ದಾಖಲು

Spread the love

ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

 

ಆಗಸ್ಟ್‌ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಈ ನಡುವೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿರುದ್ಧ ಚಿತ್ರದುರ್ಗ ಬಾಲಕಿಯರ ಬಾಲಮಂದಿರ ಎದುರು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಮಕ್ಕಳ ಪರವಾಗಿ ಹೋರಾಟ ನಡೆಸುತ್ತೇವೆ. ಶ್ರೀಗಳನ್ನು ಕೂಡಲೇ ಬಂಧಿಸಬೇಕು. ದೊಡ್ಡವರನ್ನು ಬಂಧಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳವಾದ ಬಾಲಮಂದಿರ ಎದುರು 100m ಮೀಟರ್‌ ಗಳ ವರೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ, ಸೆಪ್ಟಂಬರ್‌ 1ಕ್ಕೆ ಅರ್ಜಿ ವಿಚಾರಣೆ

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಮುರುಘಾ ಶ್ರೀ ಅರ್ಜಿಯನ್ನು ಸೋಮವಾರ ಶ್ರೀಗಳ ಪರ ವಕೀಲರು ಚಿತ್ರದುರ್ಗಕೋರ್ಟ್‌ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್‌ 1ರಂದು ನಡೆಸುವುದಾಗಿ ತಿಳಿಸಿದೆ.

ಈ ನಡುವೆ ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಇದೀಗ ಪೋಲಿಸರ ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿತು. ಈ ನಡುವೆ ಮಠಕ್ಕೆ ವಾಪಸ್ಸು ಬಂದ ಶ್ರೀಗಳು ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ನಾವೆಲ್ಲರೂ ಒಟ್ಟಾಗಿ, ಇದಕ್ಕೆ ಶಾಶ್ವತವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಅಂತ ಹೇಳಿದರು.

ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಅಂತ ತಿಳಿಸಿದರು. ಸದ್ಯದ ಕೆಟ್ಟ ಪರಿಸ್ಥಿತಿಯಿಂದ ನಾವು ಹೊರಗೆ ಬರುತ್ತೇವೆ ಅಂತ ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ, ಮಠದ ಭಕ್ತರು ನಮ್ಮ ಜೊತೆ ಇರುವುದು ನಮಗೆ ಧೈರ್ಯ ತಂದಿದೆ. ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ಅಭಿಮಾನದ ಚಿಲುಮೆಯನ್ನು ಚಿಮ್ಮಿಸುವವರಿಗೆ ಕೂಡ ಧನ್ಯವಾದವನ್ನು ತಿಳಿಸುತ್ತೇವೆ ಅಂತ ವಿರೋಧಿಗಳಿಗೆ ಟಾಂಗ್ ನೀಡಿದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ