ದಾವಣಗೆರೆ: ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಮೇ.ಬಿ.ಆರ್. ಹರ್ಷ ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾದರು.
ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಡಾ. ಬಿ.ಆರ್. ಹರ್ಷ ಸೇನೆಯಲ್ಲೂ ಕಾರ್ಯ ನಿರ್ವಹಿಸಿದವರು. ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಎರಡು ತಿಂಗಳನಿಂದ ಕಾರ್ಯ ನಿರ್ವಹಿಸುತ್ತಿದ್ದರು.
ದಾವಣಗೆರೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು.
ಮೃತರ ಪತ್ನಿ ಡಾ. ಮಧುಮಾಲ ಸಹ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದರು. ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧು ಬಳಗ ಅಗಲಿದ್ದಾರೆ. ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
Laxmi News 24×7