Breaking News
Home / ಜಿಲ್ಲೆ / ಬಾಗಲಕೋಟೆ / ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು

ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು

Spread the love

ಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ?

ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ.

ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

ಬನಹಟ್ಟಿಯ ಮಂಗಳವಾರ ಪೇಟೆ ನಿವಾಸಿ ಭೀಮಪ್ಪ ಬಾಗಲಕೋಟ(80) ಮತ್ತು ಇವರ ಪತ್ನಿ ಕಸ್ತೂರಿ ಬಾಗಲಕೋಟ(74) ಸಾವಿನಲ್ಲೂ ಒಂದಾದ ದಂಪತಿಗಳಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಪ್ಪ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ 1 ಗಂಟೆಗೆ ನಿಧನ ಹೊಂದಿದ್ದರು. ಆರೋಗ್ಯವಾಗಿಯೇ ಮನೆಯಲ್ಲಿದ್ದ ಪತ್ನಿ ಕಸ್ತೂರಿ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ಹೃದಯಾಘಾತದಿಂದ ಬೆಳಗಿನ ಜಾವ 4 ಗಂಟೆಗೆ ನಿಧನರಾದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ