ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಜಮೀನಿನಲ್ಲಿ ಆರೋಪಿಯೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಜಮೀನಿನಲ್ಲಿ ಬೆಳೆದಿದ್ದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಬೆಳಗಾವಿ ಜಿಲ್ಲಾ ಸಿಇಎನಪರಾಧ ವಿಭಾಗ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಬೆಳಗಾವಿ ಪೊಲೀಸ್ ಅಧೀಕ್ಷಕ ಡಾ. ಸಂಜೀವ್ ಪಾಟೀಲ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹಾನಿಂಗ ನಂದಗಾAವಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಸಿಪಿಐ ಬಿಆರ್ ಗಡ್ಡೇಕರ್, ಹಾಗೂ ಎಎಸ್‌ಐ ಎಎಚ್ ಭಜಂತ್ರಿ, ಬಿಎಸ್ ಚಿನ್ನಿಕುಪ್ಪಿ, ವೈವಿ ಸಪ್ತಸಾಗರ, ಎಂಬಿ ಕಾಂಬಳೆ, ಎಸ್‌ಎ ಬೇವನೂರು, ಎನ್‌ಆರ್ ಘಡ್ಡೆಪ್ಪನವರ್ ಮೊದಲಾದವರು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.