Breaking News

ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆ

Spread the love

ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಮುಂದುವರಿದಿದ್ದು, ಸಂತ್ರಸ್ತ ಬಾಲಕಿಯರನ್ನು ಮಂಗಳವಾರ ನಗರದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು.

 

ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್‌ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು.

ಜಮಾಯಿಸಿದ ಜನ, ಪ್ರತಿಭಟನೆ
ಬಾಲಕಿಯರನ್ನು ನ್ಯಾಯಾಲಯಕ್ಕೆ ಕರೆತಂದ ವಿಚಾರ ತಿಳಿಯುತ್ತಲೇ ಕೋರ್ಟ್‌ ಎದುರು ನೂರಾರು ಮಂದಿ ಜಮಾಯಿಸಿದರು. ತನಿಖೆ ನಡೆಯುತ್ತಿರುವ ರೀತಿ, ಪೊಲೀಸರ ಕಾರ್ಯವೈಖರಿ ಹಾಗೂ ಮುರುಘಾ ಶರಣರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು.

ನ್ಯಾಯಾಲಯದ ಮುಂದೆ ಜಮಾಯಿಸಿದ್ದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು. ದೂರು ದಾಖಲಾಗಿ ಮೂರು ದಿನಗಳಾದರೂ ಸಂತ್ರಸ್ತ ಮಕ್ಕಳನ್ನೇ ಅಲ್ಲಿಂದಿಲ್ಲಿಗೆ ಕರೆದುಕೊಂಡು ಓಡಾಡುವುದು, ದಿನವಿಡೀ ಹೇಳಿಕೆ ಪಡೆದುಕೊಳ್ಳಲಾಗುತ್ತಿದೆ. ಆದರೆ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಒಳಪಡಿಸದಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇದೇ ವೇಳೆ ಬೇಟಿ ಬಚಾವ್‌, ಬೇಟಿ ಪಡಾವೋ’ ಎಂಬ ಬ್ಯಾನರ್‌ ಹಿಡಿದು ಒಂದಿಷ್ಟು ಜನ ಮೌನವಾಗಿ ಪ್ರತಿಭಟನೆ ನಡೆಸಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ