Breaking News
Home / ಜಿಲ್ಲೆ / ಬೆಳಗಾವಿ / ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಕ್ಷ್ಮಣ ಸವದಿ ಕಾರು ಅಪಘಾತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Spread the love

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದಿದೆ.

 

ಈ ಕಾರಿನಲ್ಲಿ ಸವದಿ ಸೇರಿದಂತೆ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ ಬೆಳಗಾವಿಗೆ ಬರುವಾಗ ಕಾರು ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ