ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ ಕಳೆದಿದ್ದಾರೆ