ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ.ಚಿತ್ರದುರ್ಗ: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರ ಸಂಬಂಧ ಚಿತ್ರದುರ್ಗ ಎಸ್ಪಿ ಪರಶುರಾಮ್ಗೆ ಎನ್ಸಿಪಿಸಿಆರ್ (NCPCR) ನೋಟಿಸ್ ಜಾರಿ ಮಾಡಲಾಗಿದೆ.
ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ 9 ಪ್ರಶ್ನೆ ಕೇಳಿ 7 ದಿನದಲ್ಲಿ ಉತ್ತರಿಸಲು NCPCR ನೋಟಿಸ್ ನೀಡಿದೆ. ಸುಮೊಟೊ ಕೇಸ್ ದಾಖಲಿಸಿಕೊಂಡು NCPCR ನೋಟಿಸ್ ಹಿನ್ನೆಲೆ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ. ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಸಿಆರ್ಪಿಸಿ 164ರಡಿ ಹೇಳಿಕೆ ದಾಖಲಿಸಿಕೊಂಡಿರುವ ವರದಿಯನ್ನು ಪೊಲೀಸರು ಜಡ್ಜ್ಗೆ ಸಲ್ಲಿಸಲಿದ್ದಾರೆ. ಮುರುಘಾಶ್ರೀಗೆ ನೋಟಿಸ್ ನೀಡಿ ವಿಚಾರಣೆ ಸಾಧ್ಯತೆಯಿದ್ದು, ತನಿಖಾಧಿಕಾರಿ DySP ಅನಿಲ್ ನೇತೃತ್ವದಲ್ಲಿ ಬಂಧಿಸಿ ಕಾನೂನು ಕ್ರಮ ಸಾಧ್ಯತೆ ಎನ್ನಲಾಗುತ್ತಿದೆ.
ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
ಆ.29 ರಂದು ಬಾಲ ಮಂದಿರ ಬಳಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೂ ನೋಟಿಸ್ ನೀಡಿದ್ದು, ಮಕ್ಕಳ ಆಯೋಗದ ಅಧ್ಯಕ್ಷೆ ಜಯಶ್ರೀ ಆಗಮಿಸಿದ್ದ ವೇಳೆ ಪ್ರತಿಭಟನೆ ನಡೆಸಿದ ಹಿನ್ನೆಲೆ ರಾಜ್ಯ ಮಕ್ಕಳ ಆಯೋಗದಿಂದ ಎಸ್ಪಿ ಕೆ.ಪರಶುರಾಮ್ಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಮುರುಘಾಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.