Breaking News

ಎಲ್​​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91 ರೂ. ಇಳಿಕೆ

Spread the love

ನವದೆಹಲಿ: ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್​​​ಪಿಜಿ ಗ್ಯಾಸ್​ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.

19 ಕೆಜಿ ವಾಣಿಜ್ಯ ಇಂಧನ ಗ್ಯಾಸ್​ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ 1ನೇ ತಾರೀಖಿನಂದು ಗ್ಯಾಸ್ ಸಿಲಿಂಡರ್​ ಬೆಲೆ ಪರಿಷ್ಕರಿಸುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆ ಗಮನದಟ್ಟುಕೊಂಡು ಬೆಲೆ ಪರಿಷ್ಕರಣೆ ಮಾಡಲಾಗ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿರುವ ಕಾರಣ ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್​ ಬೆಲೆಯಲ್ಲಿ ಇಳಿಕೆ ಮಾಡಿವೆ.ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 91.5 ರೂಪಾಯಿ ಕಡಿಮೆ ಆಗಿದೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ