ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಎರಡು ಕ್ಷೇತ್ರಗಳಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಬೇಕು ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗೋಕಾಕ್‍ನಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಆ ರೀತಿ ಇರಬಹುದು, ಆದರೆ ಅಂತಿಮವಾಗಿ ಒಂದೇ ಕಡೆ ಸ್ಪರ್ಧಿಸಬೇಕಾಗುತ್ತದೆ.
ಎರಡು ಕಡೆ ಸ್ಪರ್ಧಿಸುವ ಅನಿವಾರ್ಯತೆ ಇಲ್ಲ. ಆಯಾ ಕ್ಷೇತ್ರಗಳಲ್ಲಿ ಸಾಕಷ್ಟು ಅಭ್ಯರ್ಥಿಗಳಿದ್ದಾರೆ, ಅಭ್ಯರ್ಥಿಗಳು ಇಲ್ಲ ಎಂದರೆ ಆ ಮಾತು ಬೇರೆ ಎಂದರು.
ಎರಡನೇ ಕ್ಷೇತ್ರವಾದ್ರೆ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಿರಿ ಎಂಬ ಪ್ರಶ್ನೆಗೆ ಬೇರೆ ಕ್ಷೇತ್ರ ಆಯ್ಕೆ ಮಾಡೋದು ಆದರೆ ಸವದತ್ತಿ ಕ್ಷೇತ್ರ ಒಂದೇ. ಸವದತ್ತಿ ಯಾಕೆಂದರೆ ನಮ್ಮ ಪಕ್ಷ ಗೆಲ್ಲಬೇಕು ಎಂದು ಅಲ್ಲಿ ನಾವು ಸಂಘಟನೆ ಮಾಡುತ್ತಿದ್ದೇವೆ.
ಸವದತ್ತಿ ಅಷ್ಟೇ ಅಲ್ಲದೇ ಗೋಕಾಕ್, ಅಥಣಿಯಲ್ಲಿಯೂ ಪಕ್ಷ ಗೆಲ್ಲಬೇಕು ಎಂದು ಸಂಘಟನೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
Laxmi News 24×7