Breaking News

ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ

Spread the love

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ನೆಲಮಂಗಲ ಬಳಿ ಇರುವ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿರುವ ಅವರು, ಕ್ಷೇಮವನ ಉದ್ಘಾಟನೆ ಮಾಡಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಹೊಸದಾಗಿ ನೇಮಕಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯುಪಿ ಸಿಎಂ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ ಉತ್ತರ ಪ್ರದೇಶದಿಂದ ಹೊರಟು 11.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿರು.

ನಂತರ, ಬೆಳಗ್ಗೆ 11.55ಕ್ಕೆ ಎಸ್​ಡಿಎಮ್ ಕೇಂದ್ರಕ್ಕೆ ತೆರಳಿದರು.ಈ ವೇಳೆ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸಚಿವರಾದ ಡಾ.ಕೆ. ಸುಧಾಕರ್‌, ಆನಂದ ಸಿಂಗ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ