Breaking News
Home / ರಾಜಕೀಯ / ನವೆಂಬರ್ 2ರಂದು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಮೋದಿ ಆಗಮನ: ಸಿಎಂ ಬೊಮ್ಮಾಯಿ ಮಾಹಿತಿ

ನವೆಂಬರ್ 2ರಂದು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಮೋದಿ ಆಗಮನ: ಸಿಎಂ ಬೊಮ್ಮಾಯಿ ಮಾಹಿತಿ

Spread the love

ಬೆಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನವೆಂಬರ್ 2 ರಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಅಭಿವೃದ್ಧಿ ಭೂಮಿ ಪೂಜೆಗೆ ತೆರಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಮ್‌ನಲ್ಲಿ ಅಲೆಗ್ಸಾಂಡರ್‌ ಗೆ ಅರಿಸ್ಟಾಟಲ್‌ ಪಾಠ ಹೇಳಿದ ಜಾಗವೆಂದು ಒಂದು ಕಲ್ಲಿಟ್ಟು ಇತಿಹಾಸ ಹೇಳುತ್ತಾರೆ. ಆದರೆ ನಮ್ಮಲ್ಲಿ ಅದಕ್ಕಿಂದ ದೊಡ್ಡ ಇತಿಹಾಸವಿದೆ. ಆ ಇತಿಹಾಸವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಇನ್ನು ಸ್ವಲ್ಪ ವರ್ಷ ಕಳೆದರೆ ಬೆಂಗಳೂರಿನ ಜನ ಕೆಂಪೇಗೌಡರನ್ನು ಮರೆಯುತ್ತಾರೆ. ಬೆಂಗಳೂರಿನ ಇತಿಹಾಸವನ್ನು ಮರೆಯುತ್ತಾರೆ. ಆಗಾಗಿ ಇಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆವು. ಕೇವಲ ಇಲ್ಲಿ ಮಾತ್ರವಲ್ಲದೆ ಕೆಂಪೇಗೌಡರ ಕುರುಹುಗಳು ಇರುವಲ್ಲೆಲ್ಲಾ ಅಭಿವೃದ್ಧಿ ಮಾಡುವ ಕೆಲಸವನ್ನು ಪ್ರಾಧಿಕಾರ ಮಾಡುತ್ತದೆ. ಬೆಂಗಳೂರಿನ ಸುತ್ತ ನಾಲ್ಕು ಸ್ಯಾಟಲೈಟ್ ಟೌನ್‌ ಗಳನ್ನು ನಿರ್ಮಾಣ ಮಾಡಲಿದ್ದೇವೆ ಎಂದರು.

ಕರ್ನಾಟಕದ ಇತಿಹಾಸದಲ್ಲಿ ಸುವರ್ಣ ಯುಗವೆಂದರೆ ವಿಜಯನಗರ ಸಾಮ್ರಾಜ್ಯ. ಆ ಯುಗದಲ್ಲಿ ಅಗಣ್ಯರತ್ನ ಅಂದರೆ ಅದು ಕೆಂಪೇಗೌಡರು. ಬೆಂಗಳೂರು ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಂಪೇಗೌಡರ ಹೆಸರಿನ ವಿಮಾನ ನಿಲ್ದಾಣದಲ್ಲಿ ಬೃಹತ್ ಕೆಂಪೇಗೌಡರ ಪ್ರತಿಮೆಯನ್ನು ಮಾಜಿ ಸಿಎಂ ಬಿಎಸ್‌ವೈ ಅಡಿಗಲ್ಲು ಹಾಕಿದರು. ಕೆಂಪೇಗೌಡರ ಜೀವನ ಸ್ಪೂರ್ತಿಯಾಗಬೇಕೆಂದು ಪ್ರತಿ ಗ್ರಾಮದಿಂದಲೂ ಮಣ್ಣನ್ನು ತೆಗೆದುಕೊಂಡು ಬಂದು ಇಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

Spread the love ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ