Breaking News

ಮುರುಘಾ ಶ್ರೀ ವಿರುದ್ಧದ ಕೇಸ್ ಸಿಬಿಐಗೆ ವಹಿಸಿ: ಬೆಳಗಾವಿಯಲ್ಲಿ ರಾಜ್ಯ ಉಪ್ಪಾರ ಮಹಾಸಭಾ ಆಗ್ರಹ

Spread the love

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್‍ನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಹಾಗೂ ಇನ್ನಿತರರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲದೇ ಇಬ್ಬರು ಅಪ್ರಾಪ್ತ ಬಾಲಕಿಯರಲ್ಲಿ ಹಿಂದುಳಿದ, ದಲಿತ ಬಾಲಕಿಯರು ಇದ್ದು.

ಬಾಲಕಿಯರಿಗೆ ಆಗಿರುವ ದೌರ್ಜನ್ಯಕ್ಕೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಗುರುವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಲ್ಲದೇ ಈ ಕೇಸ್‍ನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನ್ಯಾಯವಾದಿ ಎನ್.ಆರ್.ಲಾತೂರ್ ಹಿಂದುಳಿದ ಹಾಗೂ ದಲಿತ ಅಪ್ರಾಪ್ತ ಬಾಲಕಿಯರ ಮೇಲೆ ಮುರುಘಾ ಶ್ರೀಗಳಿಂದ ಅತ್ಯಾಚಾರ ಆಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಒಂದು ವಾರ ಕಳೆದ್ರೂ ಮುರುಘಾ ಶರಣರನ್ನು ಬಂಧಿಸಲು ಪೊಲೀಸರು ತಯಾರಾಗಿಲ್ಲ. ಸರಿಯಾದ ರೀತಿಯಲ್ಲಿ ತನಿಖೆಯನ್ನು ನಡೆಸುತ್ತಿಲ್ಲ. ಈ ಅತ್ಯಾಚಾರ ಪ್ರಕರಣವನ್ನು ತಕ್ಷಣವೇ ಸಿಬಿಐಗೆ ವಹಿಸಬೇಕು.

 


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ