Breaking News

ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ವಿಶ್ವ ದಾಖಲೆ

Spread the love

ವಿಧಾನ ಪರಿಷತ್ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಜಯಗಳಿಸುವ ಮೂಲಕ ಬಸವರಾಜ ಹೊರಟ್ಟಿ ಐತಿಹಾಸಿಕ ದಾಖಲೆ ಬರೆದಿದ್ದು, ಅವರ ಸಾಧನೆ ಲಂಡನ್ ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರ್ಪಡೆಯಾಗಿದೆ.

ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ, ಶಿಕ್ಷಣ ಸಚಿವರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಕಳೆದ 5 ದಶಕಗಳಿಂದ ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಬಸವರಾಜ ಹೊರಟ್ಡಿ ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಈ ಕುರಿತು ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ದೃಢೀಕರಣ ಪತ್ರ ನೀಡಿ ಗೌರವಿಸಿದೆ. ಇದು ಶಿಕ್ಷಕ ಸಮುದಾಯಕ್ಕೆ ಸಂದ ಗೌರವವಾಗಿದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ