ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸೆ.30ರ ವರೆಗೆ ಅರ್ಜಿ ಸಲ್ಲಿಸಬಹುದು.
ಇಲಾಖೆಯ ವೆಬ್‌ಸೈಟ್ schooleducation.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ದಿನಾಂಕದ ಬಗ್ಗೆ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ಆದರೆ, ಶಾಲಾ ಶಿಕ್ಷಣ ಮತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಇತ್ತೀಚೆಗೆ ನ.6ರಂದು ಟಿಇಟಿ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದರು. ಅದರಂತೆ ನವೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Laxmi News 24×7