ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ರಾಜ್ಯ ಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಇಂದು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕೃಷಿ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಗೆ ತಂದಿದೆ. ಇದು ರೈತರ ಪರವಾಗಿಲ್ಲ ಎಂದು ಆರೋಪಿಸಿದರು
ಕೇಂದ್ರ ಸರ್ಕಾರ ಜಾರಿ ತರಲು ಹೊರಟಿರುವ ಮಸೂದೆಗಳಿಂದ ರೈತರಿಗೆ ಲಾಭವಿಲ್ಲ. ಕಾರ್ಪೊರೇಟ್ ಕಂಪನಿಗಳ ಪರವಾಗಿ ಕಾನೂನು ತಂದಿದ್ದಾರೆ. ನಾವು ರೈತರ ಪರವಾಗಿ ನ್ಯಾಯಯುತ ಬೇಡಿಕೆ ಇಟ್ಟಿದ್ದು, ನ್ಯಾಯ ಕೇಳಿದ ಸಂಸದರನ್ನು ಅಮಾನತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.