Breaking News

ಜಾರಕಿಹೊಳಿ ಬ್ರದರ್ಸ ಬಿಟ್ಟು ಯಮಕನಮರಡಿಯಲ್ಲಿ ಕಾರ್ಯಕ್ರಮ ಮಾಡಿದ್ದು ತಪ್ಪು: ಸಂಜಯ್ ಪಾಟೀಲ್

Spread the love

ನಿಗಮ ಮಂಡಳಿ ಅಧ್ಯಕ್ಷರಾದ ಹಿನ್ನೆಲೆ ಮಾರುತಿ ಅಷ್ಟಗಿ ಅವರಿಗೆ ಯಮಕನಮರಡಿಯಲ್ಲಿ ಅವರ ಕಾರ್ಯಕರ್ತರು ಅಭಿನಂದನಾ ಸಮಾರಂಭ ಮಾಡಿದ್ದರು.

ಅದಕ್ಕೆ ನಾವು ಪಕ್ಷದ ಶಿಷ್ಟಾಚಾರ ಹಾಕಲು ಬರುವುದಿಲ್ಲ. ಆದರೆ ಜಾರಕಿಹೊಳಿ ಬ್ರದರ್ಸ ಬಿಟ್ಟು ಕಾರ್ಯಕ್ರಮ ಮಾಡಿದ್ದು ತಪ್ಪು ಎನ್ನುವ ಮೂಲಕ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಎಂ.ಕೆ.ಹುಬ್ಬಳ್ಳಿಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ನಮ್ಮ ಬಿಜೆಪಿ ಪಕ್ಷದ ನಾಯಕರು, ಹಿರಿಯರು, ಮಾರ್ಗದರ್ಶಕರು. ಹೀಗಾಗಿ ಅವರನ್ನು ಮತ್ತು ಜಿಲ್ಲೆಯ ಎಲ್ಲ ನಾಯಕರನ್ನು ಕರೆಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಕಾರ್ಯಕ್ರಮ ಮಾಡುತ್ತೇವೆ ಎಂದರು.

ಇನ್ನು 50 ಕ್ಷೇತ್ರಗಳಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಪ್ರವಾಸ ಮಾಡುತ್ತಿದ್ದಾರೆ. ಅದರಲ್ಲಿ ನಮ್ಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಕೂಡ ಇದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ