ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು.
ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ.
ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರದಾನಿ ಮೋದಿ ರವರನ್ನು ಸ್ವಾಗತಿಸಿದರು.