Breaking News

ಪ್ಲ್ಯಾಸ್ಟಿಕ್ ಚೀಲದಲ್ಲಿ‌ ನವಜಾತ ಶಿಶು ಮರಕ್ಕೆ ನೇತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Spread the love

ಬೆಳಗಾವಿ: ಕಳೆದ ಒಂದು ವಾರದ ಹಿಂದೆ ಪ್ಲಾಸ್ಟಿಕ್‌ ಕವರ್​​ನಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ – ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ, ಕಳೆದ ಆರು ದಿನಗಳ ಹಿಂದೆ (ಆ.25ರಂದು) ಪ್ಲ್ಯಾಸ್ಟಿಕ್ ಚೀಲದಲ್ಲಿ‌ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು.‌ ಈ ವೇಳೆ ಮಗುವನ್ನು ರಕ್ಷಣೆ ಮಾಡಿದ ಆಶಾ ಕಾರ್ಯಕರ್ತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಾದ ಬಳಿಕ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಖಾನಾಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮದುವೆ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿ ಹುಟ್ಟಿದ ಮಗುವನ್ನು ಯಾರಿಗೂ ಗೊತ್ತಾಗದಂತೆ ಪ್ಲಾಸ್ಟಿಕ್ ಚೀಲದಲ್ಲಿ ಮರಕ್ಕೆ ನೇತು ಹಾಕಿ ಹೋಗಿದ್ದರು. ಸದ್ಯ ಪೊಲೀಸರ ತನಿಖೆಯಿಂದ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ