Breaking News

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್

Spread the love

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ(ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13ಕ್ಕೇರಿದೆ. ಈ ಪರೀಕ್ಷೆಯ ಅಕ್ರಮದ ಕಿಂಗ್​ ಪಿನ್​ ಎಂದೇ ಕರೆಯಲಾಗುತ್ತಿದ್ದ ಜಿಲ್ಲೆಯ ಗೋಕಾಕ್​ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ.

ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕ್​ನ ಪ್ರಿನ್ಸಿಪಲ್ ಜೆಎಂಎಫ್‌ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7ದಿನಗಳ ವರೆಗೆ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಕಳೆದ‌ ಆ.07ರಂದು ಕೆಪಿಟಿಸಿಎಲ್‌ನ ಕಿರಿಯ ಅಭಿಯಂತರ (ಜೆಇ) ನೇಮಕಾತಿ ಪರೀಕ್ಷೆ ಸಮಯದಲ್ಲಿ ಗೋಕಾಕ್​ ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಆರೋಪಿ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ ಎಂಬಾತ ಸ್ಮಾರ್ಟ್ ವಾಚ್‌ನ ಕ್ಯಾಮೆರಾ ಮೂಲಕ ಪ್ರಶ್ನೆಪತ್ರಿಕೆಯನ್ನು ಫೋಟೋ ತೆಗೆದು ಟೆಲಿಗ್ರಾಂ ಮೂಲಕ ಪ್ರಮುಖ ಆರೋಪಿ ಸಂಜೀವ ಭಂಡಾರಿಗೆ ರವಾನಿಸಿದ್ದರು ಎನ್ನಲಾಗ್ತಿದೆ. ಈ ಅಕ್ರಮದ ಕುರಿತು ಗೋಕಾಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸಂಜೀವ ಭಂಡಾರಿ ತಲೆಮರೆಸಿಕೊಂಡಿದ್ದರು. ಅಲ್ಲದೇ ವಕೀಲರ ಮೂಲಕ ಎರಡು ಬಾರಿ ಜಾಮೀನಿಗಾಗಿ ಸಂಜು ಭಂಡಾರಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿತು.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ