Breaking News

ಮಹಿಳೆಯ ಜೊತೆ ದುರ್ನಡತೆ: ಶಾಸಕ ಲಿಂಬಾವಳಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Spread the love

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಯ ವಿರುದ್ಧ ಬಳಸಿರುವ ಪದ ಹಾಗೂ ಅವರ ದುರ್ನಡತೆ ಬಿಜೆಪಿಯ ಹೀನಾಯ ಸಂಸ್ಕೃತಿಯನ್ನು ಎತ್ತಿ ತೋರುತ್ತದೆ. ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಗರ ಪ್ರಚಾರ ಸಮಿತಿಯಿಂದ ಪ್ರತಿಭಟನೆ ನಡೆಸಿ ಹಾಗೂ ಪ್ರತಿಕೃತಿ ದಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್, ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಗೌರವ ನೀಡಬೇಕೆಂದು ಪ್ರತಿಬಾರಿಯೂ ತಮ್ಮ ಸುಳ್ಳು ಭಾಷಣವನ್ನು ನುಡಿಯುತ್ತಲೇ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ನಾಯಕರು ಕರ್ನಾಟಕದಲ್ಲಿ ಮಹಿಳೆಯರಿಗೆ ಯಾವ ರೀತಿಯಲ್ಲಿ ಗೌರವ ನೀಡುತ್ತಿದ್ದಾರೆ ಎಂಬುದರ ಬಗ್ಗೆ ಮೊದಲು ಮಾಹಿತಿಯನ್ನು ಪಡೆದು ಪ್ರಧಾನಿ ಮೋದಿ ಸೂಕ್ತ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದರು.

ಪ್ರಧಾನಿ ಸೂಕ್ತ ಕ್ರಮ ಜರುಗಿಸದೇ ಹೋದರೆ ನೀವು ಮಹಿಳೆಯರ ವಿರೋಧಿ ಎಂಬುದು ಸಾಬೀತಾಗುತ್ತದೆ. ಜನಪ್ರತಿನಿಧಿಯಾದ ಅರವಿಂದ್ ಲಿಂಬಾವಳಿ ಬಳಿ ಜನರು ಸಂಕಷ್ಟವನ್ನು ತಿಳಿಸಲು ಬಂದರೆ ಅವರ ವಿರುದ್ಧವೇ ಅವಾಚ್ಯ ಪದ ಬಳಸಿ ಅವರಿಗೆ ಬೆದರಿಕೆಯನ್ನು ಸಹ ಹಾಕಿದ್ದಾರೆ. ಇಂತಹ ಜನಪ್ರತಿನಿಧಿ ರಾಜ್ಯಕ್ಕೆ ಬೇಕೆ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ