Breaking News

ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

Spread the love

ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು.

ಅವರ ಹೇಳಿಕೆಯಂತೆ ಏನೂ ಕ್ರಮ ತೆಗೆದುಕೊಂಡಿಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ. ತಹಸೀಲ್ದಾರ್ ಕಚೇರಿ, ಪೊಲೀಸ್ ಠಾಣೆ, ಪಿಡಬ್ಲ್ಯೂಡಿ ಇಲಾಖೆ, ನೀರಾವರಿ ಇಲಾಖೆ ಯಾವ ಸರ್ಕಾರಿ ಕಚೇರಿಗಳಿಗೆ ಹೋದರೂ ಭ್ರಷ್ಟಾಚಾರವಿಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಂಧಿಸಿದಂತೆ `ಭ್ರಷ್ಟಾಚಾರ ನಡೆದಿದ್ದರೆ ಸಾಕ್ಷಿ ನೀಡಲಿ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ